ಗದಗ: ನಗರದ ಪ್ರತಿಷ್ಠಿತ ಸಂಸ್ಥೆಯಾದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ, ವಿನಯ್ ಚಿಕ್ಕಟ್ಟಿ ಶಾಲೆ (ICSE), ಹಾಗೂ ಬಿಪಿನ್ ಚಿಕ್ಕಟ್ಟಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನಾಳೆ (ಫೆಬ್ರುವರಿ 28) ಶುಕ್ರವಾರ ಮುಂಜಾನೆ 11 ಗಂಟೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು 2024-25 ರ ವಿಜ್ಞಾನ ವಸ್ತು ಪ್ರದರ್ಶನ ಜರುಗಲಿದೆ.
ಮುಖ್ಯ ಅತಿಥಿಗಳಾಗಿ ಡಯಟ್ ಉಪನ್ಯಾಸಕರಾದ ಶ್ರೀ. ಜಿ ಡಿ ದಾಸರ ಹಾಗೂ ಡಿಡಿಪಿಐ ಕಚೇರಿಯ ತಾಂತ್ರಿಕ ಸಹಾಯಕರಾದ ಶ್ರೀ. ಎಂ.ಎಚ್.ಸವದತ್ತಿ ಅವರು ಆಗಮಿಸಲಿದ್ದಾರೆ.
ಅಧ್ಯಕ್ಷತೆಯನ್ನ ಚಿಕ್ಕಟ್ಟಿ ಸಂಸ್ಥೆಯ ಸಂಸ್ಥಾಪಕರಾದ ಪ್ರೊ.ಎಸ್.ವೈ.ಚಿಕ್ಕಟ್ಟಿ ಅವರು ವಹಿಸಿಕೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆಂದು ಶಾಲಾ ಪ್ರಕಟನೆ ತಿಳಿಸಿದೆ.
