ಗದಗ: ನಾಳೆ 76 ನೇ ಗಣರಾಜ್ಯೋತ್ಸವ ಸಂಭ್ರಮ. ಈ ಹಿನ್ನೆಲೆ ಗದಗನಲ್ಲೂ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ನಗರದ ಪ್ರತಿಷ್ಠಿತ ಸಂಸ್ಥೆಯಾದ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ ನೆರವೇರುತ್ತಿದೆ.
ಧ್ವಜಾರೋಹಣವನ್ನ ಹೈಕೋರ್ಟನ ನಿವೃತ್ತ ನ್ಯಾಯಾಧೀಶರಾದ ಗಂಗಾವತಿಯ ಅರಳಿ ನಾಗರಾಜ ಅವರು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನರೇಗಲ್ಲ ಅನ್ನದಾನೇಶ್ವರ ಪದವಿ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ
ಬಿ. ಎಫ್.ಚೇಗರೆಡ್ಡಿ ಅವರು ಆಗಮಿಸಲಿದ್ದಾರೆ.
ಸಂಸ್ಥೆಯ ಅಧ್ಯಕ್ಷರಾದ ಎಸ್.ವೈ.ಚಿಕ್ಕಟ್ಟಿ ಅವರು ಸಮಾರಂಭದ ಉಪಸ್ಥಿತಿ ವಹಿಸಲಿದ್ದಾರೆ.
ಇದೇ ವೇಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ ಎಂದು ಶಾಲಾ ಪ್ರಕಟನೆ ತಿಳಿಸಿದೆ.