Headlines

ಕನ್ನಡತನವೆನ್ನುವುದು ಬದುಕಿನ ಕ್ರಮವಾಗಲಿ : ಡಾ. ತೋಂಟದ ಸಿದ್ದರಾಮ ಸ್ವಾಮಿಗಳು

ಗದಗ: ಕುವೆಂಪು ಅವರು ಹೇಳುವಂತೆ ಕನ್ನಡವೆನ್ನುವುದು ಮನೆಯ ಬಾಗಿಲಾದರೆ, ಇತರ ಭಾಷೆಗಳು ಮನೆಯ ಕಿಡಕಿಗಳಂತಿರಲಿ. ಎಲ್ಲ ದಿಕ್ಕಿನಿಂದಲೂ ಜ್ಞಾನದ ಬೆಳಕು ಹರಿದು ಬಂದಾಗ ವ್ಯಕ್ತಿ ಪರಿಪೂರ್ಣನಾಗುತ್ತಾನೆ. ಪ್ರತಿಯೊಬ್ಬರು ಆಡುವ ಭಾಷೆಗಳು ಭಿನ್ನವಾದರೂ ಆಲೋಚಿಸುವುದು ಮಾತೃಭಾಷೆಯಲ್ಲಿಯೇ ಎನ್ನುವುದು ವಿಶೇಷ. ಕನ್ನಡಿಗರಾಗಿರುವ ನಾವು ಪ್ರತಿಯೊಬ್ಬರು ಕನ್ನಡವನ್ನು ಹೆತ್ತ ತಾಯಿಯಂತೆ ಗೌರವಿಸಬೇಕು. ಇಂಗ್ಲೀಷ್ ಅನಿವಾರ್ಯವಾಗಿದ್ದರೂ ನಮ್ಮ ಪ್ರಥಮ ಆದ್ಯತೆ ಕನ್ನಡವಾಗಿರಲಿ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಮಾತನಾಡಿದರು.

ಗದಗನ ತೋಂಟದಾರ್ಯ ಮಠದಲ್ಲಿ ನಡೆದ ೨೭೧೯ ನೇ ಶಿವಾನುಭವದ ಸಾನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಉಪನ್ಯಾಸವನ್ನ ಕೆ.ವಿ.ಎಸ್.ಆರ್. ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಪ್ರೋ ಬಿ.ಆರ್. ಜಾಲಿಹಾಳರವರು ನೀಡಿದರು.ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಲ್ಲಮಪ್ರಭು ಬೆಟ್ಟದೂರು ಇವರನ್ನು ಹಾಗೂ ಗದಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಬಾಲಚಂದ್ರ ಭರಮಗೌಡ್ರ ಇವರುಗಳನ್ನು ಸನ್ಮಾನಿಸಲಾಯಿತು. ಧರ್ಮಗ್ರಂಥ ಪಠಣವನ್ನು ವೈಭವ .ಸಿ. ಗಾಣಿಗೇರ, ವಚನ ಚಿಂತನೆಯನ್ನು ಖುಷಿ .ಏ. ಖಟವಟೆ ಇವರು ನಡೆಸಿಕೊಟ್ಟರು. ದಾಸೋಹ ಸೇವೆಯನ್ನು ಎಸ್.ಆರ್. ನರೆಗಲ್, ನಿವೃತ್ತ ಶಿಕ್ಷಕರು ಗದಗ ವಹಿಸಿಕೊಂಡಿದ್ದರು. ಗುರುಬಸವ ಸಿಬಿಎಎಸ್‌ಇ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನಡೆಯಿತು. ವಚನ ಸಂಗೀತವನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ್ ಸುತಾರ ನಡೆಸಿಕೊಟ್ಟರು. ಮಂಜುಳಾ ಹಾಸಲಕರ ನಿರೂಪಿಸಿದರು. ಸಮಿತಿಯ ಚೇರ್ಮನ್‌ರಾದ ಐ.ಬಿ. ಬೆನಕೊಪ್ಪ. ಸಂಮಾನಿತರನ್ನು ಪರಿಚಯಿಸಿದರು.

ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಬಾಲಚಂದ್ರ ಭರಮಗೌಡ್ರ, ಕಾರ್ಯದರ್ಶಿಯಾದ ವೀರಣ್ಣ ಗೋಟಡಕಿ, ಸದಸ್ಯರಾದ ಸೋಮಶೇಖರ ಪುರಾಣಿಕ, ವಿದ್ಯಾ ಗಂಜಿಹಾಳ, ಮಹೇಶ್ ಗಾಣಿಗೇರ, ನಾಗರಾಜ್ ಹಿರೇಮಠ, ಬಸವರಾಜ ಕಾಡಪ್ಪನವರ ಹಾಗೂ ಶಿವಾನಂದ ಹೊಂಬಳ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *