ತುಮಕೂರು, ಎಪ್ರಿಲ್ 10:
ತುಮಕೂರು ನಗರದ ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗಾ ಮಠದ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಹೆಸರನ್ನು ಇಡುವ ಪ್ರಕ್ರಿಯೆ ಆರಂಭವಾಗಿದ್ದು, ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡುವ ನಿರೀಕ್ಷೆಯಿದೆ.
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, “ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಒಪ್ಪಿಗೆ ಪಡೆದು ಕ್ರಮ ಕೈಗೊಳ್ಳಲಾಗುವುದು. ನಿಲ್ದಾಣಕ್ಕೆ ಶ್ರೀಗಳ ಹೆಸರು ಇಡುವುದು ಶಾಶ್ವತ ನಿರ್ಧಾರವಾಗಿರುತ್ತದೆ,” ಎಂದು ತಿಳಿಸಿದ್ದಾರೆ.

ಮೇಲಿನ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಅವರು ತಿಳಿಸಿರುವಂತೆ, ಶ್ರೀಗಳ ಹೆಸರಿಡುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗಿಲ್ಲ. ಈ ಹೆಸರೀಕರಣದ ಮೂಲಕ ಶ್ರೀಗಳ ಸೇವಾ ತತ್ವಗಳು ಮತ್ತು ಜನಪರ ಧೋರಣೆಗಳು railway ನಿಲ್ದಾಣದ ಮೂಲಕ ಇನ್ನಷ್ಟು ಜನರಿಗೆ ತಲುಪುವ ನಿರೀಕ್ಷೆಯಿದೆ.
