10
ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇ. 2.25ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸದ್ಯ, ಮೂಲವೇತನದ ಶೇ. 8.50ರಷ್ಟು ತುಟ್ಟಿ ಭತ್ಯೆ ಇದ್ದು, ಅದನ್ನು ಶೇ. 10.75ಕ್ಕೆ ಹೆಚ್ಚಿಸಲಾಗಿದೆ. 2024ರ ಜನವರಿ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ. ರಾಜ್ಯ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸಿನ ಮೇರೆಗೆ ತುಟ್ಟಿ ಭತ್ಯೆ ಪರಿಷ್ಕರಣೆ ಮಾಡಲಾಗಿದೆ ಎಂದು ವರದಿಯಾಗಿದೆ.