ಬೆಳಗಾವಿ: ಇಂದಿನಿಂದ ಒಂಬತ್ತು ದಿನಗಳ ಕಾಲ ಬೆಳಗಾವಿ ಅಧಿವೇಶನ ನಡೆಯಲಿದ್ದು, ಬಸವಣ್ಣನವರ ಅನುಭವ ಮಂಟಪದ ತೈಲ ವರ್ಣದ ದೈತ್ಯ ಚಿತ್ರವನ್ನ ಸುವರ್ಣಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ಅನಾವರಣಗೊಳಿಸಲಿದ್ದಾರೆ.
ಇದು ಕೇವಲ ಒಂದು ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮವಲ್ಲ, ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಹಾಗೂ ಮಹಾತ್ಮಾ ಗಾಂಧೀಜಿಯವರು ಅಧಿವೇಶನದಲ್ಲಿ ಪಾಲ್ಗೊಂಡ ಶತಮಾನೋತ್ಸವದ, ಸ್ಮರಣಾರ್ಥವಾಗಿ ನಡೆಯುವ ಒಂದು ಮಹತ್ವದ ಐತಿಹಾಸಿಕ ಕ್ಷಣವಾಗಿದೆ.