ವ್ಲಾದಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಷ್ಯಾ ಅಧ್ಯಕ್ಷರ ಪತ್ರಿಕಾ ಕಾರ್ಯದರ್ಶಿ ಡಿಮಿಟ್ರಿ ಪೆಸ್ಕೊ ಮಂಗಳವಾರ ಪ್ರಕಟಿಸಿದ್ದಾರೆ. ಆದರೆ ಪುಟಿನ್ ಅವರ ಭೇಟಿಯ ದಿನಾಂಕಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. 2022 ರಲ್ಲಿ ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಪುಟಿನ್ ಅವರ ಮೊದಲ ಭಾರತ ಭೇಟಿ ಇದಾಗಿದೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಕೊನೆಯ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದು 2021ರ ಡಿಸೆಂಬರ್ 6ರಂದು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅವರು ಭಾರತಕ್ಕೆ ಬಂದಿದ್ದರು.
ಅಕ್ಟೋಬರ್ ನಲ್ಲಿ ಕಜಾನ್ನಲ್ಲಿ ನಡೆದ ನಡೆದ 16ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷರೊಂದಿಗಿನ ಸಭೆಯಲ್ಲಿ ಮೋದಿ ಅವರು ಪುಟಿನ್ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದರು.