ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಫಲಿತಾಂಶ ಎಲ್ಲರ ಕುತೂಹಲ ಕೆರಳಿಸಿದ್ದು, ಸಿ ಪಿ ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು. ಇಬ್ಬರು ಅಭ್ಯರ್ಥಿಗಳ ನಡುವಿನ ತೀವ್ರ ಪೈಪೋಟಿ ನಡೆದಿದ್ದು, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ.
ಆರಂಭದಲ್ಲಿ ಮುನ್ನಡೆಯಲ್ಲಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಹಿಂದಿಕ್ಕಿದ ಯೋಗೇಶ್ವರ್ ಭಾರೀ ಅಂತರ ಕಾಯ್ದುಕೊಂಡಿದ್ದಾರೆ.
11ನೇ ಸುತ್ತಿನ ಮತ ಎಣಿಕೆ ಬಳಿಕ ಯೋಗೇಶ್ವರ್ ಅಂತರ ಇನ್ನಷ್ಟು ಹೆಚ್ಚಾಗಿದ್ದು 23,210 ವೋಟ್ಗಳಿಂದ ನಿಖಿಲ್ರನ್ನು ಹಿಂದಿಕ್ಕಿದ್ದಾರೆ. 12ನೇ ಸುತ್ತಿನ ಮತ ಏಣಿಕೆಯಲ್ಲಿ 22,122 ಮತಗಳ ಅಂತರದಿಂದ ಮುನ್ನಡೆಯನ್ನು ಮುಂದುವರೆಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ 73417 ಮತಗಳನ್ನ ಪಡೆದಿದ್ದರೇ ಸಿಪಿ ಯೋಗೇಶ್ವರ್ 99320 ಮತಗಳನ್ನ ಪಡೆದಿದ್ದಾರೆ. ಸಿ ಪಿ ಯೋಗೇಶ್ವರ್ 25903 ಮತಗಳ ಮೂಲಕ ಮುನ್ನಡೆಯನ್ನ ಸಾಧಿಸಿ, ಗೆಲುವು ಸಾಧಿಸಿದ್ದಾರೆ.