ಬೆಂಗಳೂರು: ಬಿಜೆಪಿಯವ್ರು ಕಾಂಗ್ರೆಸ್ ಸರ್ಕಾರ ಕೆಡವಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ಕೊಟ್ಟ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ದೊಡ್ಡ ಸದ್ದು ಮಾಡುತ್ತಿದೆ.ಇದರ ಬೆನ್ನಲ್ಲೇ,ಡಿಸಿಎಂ ಡಿಕೆ ಶಿವಕುಮಾರ, ಯತ್ನಾಳ್ ಹೇಳಿಕೆ ಮುಂದಿಟ್ಟು ವಿರೋಧ ಪಕ್ಷದವರಿಗೆ ಟಾಂಗ್ ಕೊಟ್ಟಿದ್ದಾರೆ. ಯತ್ನಾಳ್ ಅವರು 1 ಸಾವಿರ ಕೋಟಿ ವಿಚಾರವಾಗಿ ಪ್ರಸ್ತಾಪ ಮಾಡಿದ್ದರ ಬಗ್ಗೆ ಮಾಧ್ಯಮಗಳು ಯಾಕೆ ಚರ್ಚೆ ಮಾಡುತ್ತಿಲ್ಲ. ಮೊದಲು ಯತ್ನಾಳ್ ಅವರು ಈ ವಿಚಾರ ಪ್ರಸ್ತಾಪಿಸಿದ್ದು, ಮೊದಲು ಅದರ ಬಗ್ಗೆ ಚರ್ಚೆ ಮಾಡಿ ಅಂತಾ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಯತ್ನಾಳ್ ಹೇಳಿದ 1 ಸಾವಿರ ಕೋಟಿ ಹಣ ಎಲ್ಲಿಂದ ಬಂತು, ಅದು ಯಡಿಯೂರಪ್ಪ, ಅಶೋಕ್, ವಿಜಯೇಂದ್ರ, ಅಶ್ವತ್ಥ್ ನಾರಾಯಣ್, ಕುಮಾರಸ್ವಾಮಿ ಯಾರ ಮನೆಯಲ್ಲಿದೆ ಎಂದು ಚರ್ಚೆ ಮಾಡಿ. ಯತ್ನಾಳ್ ಈ ಆರೋಪ ಮಾಡಿದ ಮೇಲೆ ಬಿಜೆಪಿಯವರು ಅವರಿಗೆ ನೋಟೀಸ್ ಕೊಟ್ಟಿದ್ದಾರಾ? ಅದು ಸುಳ್ಳು ಎಂದು ಹೇಳಿದ್ದಾರಾ? ಮೊದಲು ಅಲ್ಲಿಂದ ಚರ್ಚೆ ಆರಂಭವಾಗಲಿ ಎಂದು ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.