ಮುಂಡರಗಿ:ಶ್ರೀ ಜಗದ್ಗುರು ಅನ್ನದಾನೀಶ್ವರ ಅಕ್ಕನಬಳಗದವರಿಂದ ನಾಳೆ (ಮಾ.8) ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಲಿದೆ.
ಪಟ್ಟಣದ ಶ್ರೀ ಜಗದ್ಗುರು ಅನ್ನದಾನೀಶ್ವರ ಕಲ್ಯಾಣಮಂಟಪದಲ್ಲಿ ಮುಂಜಾನೆ 10.ಗಂಟೆಗೆ ಸಮಾರಂಭ ಜರುಗಲಿದ್ದು, ದಿವ್ಯ ಸಾನಿಧ್ಯವನ್ನ ಶ್ರೀ ಜಗದ್ಗುರು ನಾಡೋಜ ಡಾ.ಅನ್ನದಾನೀಶ್ವರ ಮಹಾಶಿವಯೋಗಿಗಳು ವಹಿಸಲಿದ್ದಾರೆ.

ಶ್ರೀಮತಿ ಲಕ್ಷ್ಮೀದೇವಿ ಬೆಳವಟಗಿಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೊಳಲು ವಿರಕ್ತಮಠದ ಅಕ್ಕನ ಬಳಗದ ಅಧ್ಯಕ್ಷರಾದ, ಶ್ರೀಮತಿ ಶಾರದಾ ವೆಂಕಟಾಪುರ ಹಾಗೂ ಮುಂಡರಗಿಯ ಕನ್ನಿಕಾ ಪರಮೇಶ್ವರಿ ಮಹಿಳಾ ಮಂಡಳಿಯ ಸ್ವಾತಿ ಅಳವಂಡಿ ಅವರು ಆಗಮಿಸಲಿದ್ದಾರೆ.
ಮಹಿಳಾ ದಿನಾಚರಣೆ ಕುರಿತು ವಿಶೇಷ ಉಪನ್ಯಾಸಗಳು ಜರುಗಲಿವೆ. ಇದೇ ವೇಳೆ ಮಹಿಳಾ ದಿನಾಚರಣೆ ಪ್ರಯುಕ್ತ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ ಹಾಗೂ ಅಕ್ಕನ ಬಳಗದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.
ಸಮಾರಂಭದಲ್ಲಿ ಅನ್ನದಾನೀಶ್ವರ ಅಕ್ಕನ ಬಳಗ,ಹೊಳಲು ವಿರಕ್ತಮಠದ ಅಕ್ಕನ ಬಳಗ ಹಾಗೂ ಕನ್ನಿಕಾಪರಮೇಶ್ವರಿ ಮಹಿಳಾ ಮಂಡಳದ ಸರ್ವ ಸದಸ್ಯಣಿಯರೆಲ್ಲರೂ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಅಕ್ಕನ ಬಳಗದ ಪ್ರಕಟನೆ ತಿಳಿಸಿದೆ.